ಸುಮಾರು ೮,೦೦೦ ಯಕ್ಷಗಾನ ಪ್ರಸಂಗಗಳು ಬರೆದು ಹೋಗಿರುವ ಅಖಿಲ ಕರ್ನಾಟಕದ ಸಮಗ್ರ (ಅಂದರೆ ಎಲ್ಲಾ ಪಾಯಗಳೂ ಸೇರಿ) ಯಕ್ಷಗಾನ ಸಾಹಿತ್ಯದಲ್ಲಿ ಸುಮಾರು ಅರ್ಧದಷ್ಟು ಸಂಗ್ರಹವಿಲ್ಲದೇ ಯಾ ಸಂಗ್ರಹದ ಮಾಹಿತಿ ಇಲ್ಲದೇ ನಶಿಸಿಹೋಗಿರುವ ಸಾಧ್ಯತೆಗಳಿವೆ. ಉಳಿದ ಸುಮಾರು ೪,೦೦೦ ಪ್ರಸಂಗಗಳು ಬೇರೆ ಬೇರೆ ಸಂಗ್ರಹಗಳಲ್ಲಿ ಚದುರಿ ಹೋಗಿ, ಎಲ್ಲವೂ ಒಂದೇ ಕಡೆ ಸಿಗುವುದು ಕಷ್ಟವಾಗಿರುವುದರಿಂದ, ಒಂದೇ ಸಂಗ್ರಹದಿಂದ ವಿದ್ಯುನ್ಮಾನ ಪ್ರತಿಗಳನ್ನಾಗಿ (ಸ್ಕ್ಯಾನ್ ಪ್ರತಿಗಳನ್ನಾಗಿ) ಕೊಡುತ್ತಾ ಹೋಗುವುದಲ್ಲದೇ, ವಿದ್ಯುನ್ಮಾನ ಪ್ರತಿಗಳ ರೂಪದಲ್ಲಿ ಉಳಿದು ಹೋಗಿರುವುಗಳನ್ನು ಕಾಲಗರ್ಭದಲ್ಲಿ ನಶಿಸಿಹೋಗದಂತೆ ಕಾಪಿಡುವುದೇ ಇಲ್ಲಿ ನಮ್ಮ ಗುರಿ.